ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿಕಾಸಿತ ಭಾರತ ಸಂಕಲ್ಪ ಯಾತ್ರೆ ಯೋಜನೆಯಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರುಗಳಿಗೆ ಮಾಹಿತಿ ಕಾರ್ಯಾಗಾರ ಜರಗಿತು.
ಲೀಡ್ ಬ್ಯಾಂಕಿನ ಮುಖ್ಯಸ್ಥರಾದ ಕವಿತಾ ಶೆಟ್ಟಿ ಮತ್ತು ಉಷಾ ನಾಯಕ್ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ, ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ನವೀನ್, ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ ಹಾಗೂ ಬೆಳ್ತಂಗಡಿ, ಮಂಗಳೂರು, ಬಂಟ್ವಾಳ ಕ್ಷೇತ್ರದ ಪಂಚಾಯತ್ ಅಧ್ಯಕರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.