ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಮಾಜಿ ಉಪ ಮುಖ್ಯಮಂತ್ರಿ, ಹಾಲಿ ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಡಿ.26ರಂದು ಭೇಟಿ ನೀಡಿದರು. ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸ್ವಾಗತಿಸಿದರು. ಬಳಿಕ ಪಕ್ಷದ ಪ್ರಮುಖರು, ಕಾರ್ಯಕರ್ತರೊಂದಿಗೆ ಕುಶಲೋಪಚರಿ ನಡೆಸಿದರು.

Dr. Ashwath Narayan
ಈ ಸಂದರ್ಭದಲ್ಲಿ‌ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರದಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ‌ ವಾಮದಪದವು, ಬೂಡಾ ಮಾಜಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಯಿ‌ ಗ್ರಾಮ ಪಂಚಾಯತ್‌ ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಮಾಜಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಸೀತರಾಮ ಪೂಜಾರಿ, ಪವನ್ ಕುಮಾರ್ ಮತ್ತಿತರ ಪ್ರಮಖರು‌ ಉಪಸ್ಥಿತರಿದ್ದರು.