ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಡಿ ಯೋಜನೆಯ ಕಲ್ಲಡ್ಕ ಒಕ್ಕೂಟದ ವತಿಯಿಂದ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಆವರಣದ ಒಳಗೆ ಬೆಳೆದಿರುವ ಹುಲ್ಲು, ಗಿಡ ಗಂಟಿಗಳನ್ನು ಕಡಿದು ಸ್ವಚ್ಚತೆ ಮಾಡಲಾಯಿತು.

ಶಾಲಾ ವಾರ್ಷಿಕೋತ್ಸವ ನಡೆಸುವ ಶಾಲಾ ಅಂಗಲವನ್ನು ಗುಡಿಸಿ ಸ್ವಚ್ಛ ಮಾಡಲಾಯಿತು,. ಈ ಕಾರ್ಯಕ್ರಮದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ವಲಯ ಅಧ್ಯಕ್ಷೆ ತುಳಸಿ, ಸೇವಾ ಪ್ರತಿನಿಧಿಗಳಾದ ಗಣೇಶ್ ನೆಟ್ಲ, ವಿದ್ಯಾ, ಕಲ್ಲಡ್ಕ ಒಕ್ಕೂಟದ ಪ್ರಗತಿ ಬಂದು ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಕಲ್ಲಡ್ಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಧುಸೂದನ್ ಭಟ್ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಅಬೂಬಕ್ಕರ್ ಅಶ್ರಫ್ ಶಾಲಾ ಪರವಾಗಿ ಸ್ವಚ್ಛತಾ ಕಾರ್ಯಕ್ರಮ ಮಾಡಿದ ಯೋಜನೆಯ ಸದಸ್ಯರನ್ನು ಅಭಿನಂದಿಸಿದರು.