ನೈರುತ್ಯ ಪದವೀಧರ ಮತ್ತು ಶಿಕ್ಷಕ ಕೇತ್ರಕ್ಕಾಗಿ ಜೂ.3 ರಂದು ನಡೆಯುವ ಚುನಾವಣೆಯ ಪ್ರಯುಕ್ತ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪ್ರಮುಖರ ಸಭೆ ಸಿದ್ಧಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಮತ್ತು ಕಾವಳಪಡೂರು ಮಹಾಶಕ್ತಿ ಕೇಂದ್ರದ ಚುನಾವಣಾ ಸಹಸಂಚಾಲಕ್ ಪೊಫೆಸರ್ ನಾರಾಯಣ ಭಂಡಾರಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ರತ್ನ ಕುಮಾರ್ ಚೌಟ , ಕಾವಳಪಡೂರು ಮಹಾಶಕ್ತಿ ಕೇಂದ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಪ್ರಭು, ಶಕ್ತಿಕೇಂದ್ರ ಪ್ರಮುಖ್ ದೀಪಕ್ ಶೆಟ್ಟಿಗಾರ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕರ್ಪೆ ಮತ್ತು ಸಂಗಬೆಟ್ಟು ಗ್ರಾಮಗಳ ಬಿಜೆಪಿ ಪ್ರಮುಖರು ಭಾಗವಹಿಸಿದರು.