ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಯೋಜನಾ ಕಚೇರಿಯ ಮಾಮೇಶ್ವರ ಒಕ್ಕೂಟ ವ್ಯಾಪ್ತಿಗೆ ಸೇರಿದ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಸರಕಾರಿ ಪ್ರೌಢ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1 ಲಕ್ಷ ಅನುದಾನದ ಮಂಜೂರಾಗಿದ್ದು. ಮಂಜೂರಾತಿ ಪತ್ರ ವನ್ನು ಶಾಲೆಯ ಶಾಲಾಭಿವೃದಿ ಸಮಿತಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಮಾಮೇಶ್ವರ ಒಕ್ಕೂಟ ಅಧ್ಯಕ್ಷ ಹರೀಶ್ ವಿ ಮಾಡ, ಸೇವಾಪ್ರತಿನಿಧಿ ಯಶೋದ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಹಿಮಾನ್, ಮಾಜಿ ಅಧ್ಯಕ್ಷರಾದ ಜಗದೀಶ್ಚಂದ್ರ ಗೌಡ ನೈತೊಟ್ಟು, ಶಾಲಾ ಮುಖ್ಯ ಶಿಕ್ಷಕಿ ಸಂದ್ಯಾ ರಾಣಿ, ಮೊದಲಾದವರು ಉಪಸ್ಥಿತರಿದ್ದರು.