ಬೆಂಗಳೂರು: ಆರ್‌ಸಿಬಿ (RCB) ಗೆಲುವು ವಿಜಯೋತ್ಸವದ ವೇಳೆ ಯಡವಟ್ಟು ಸಂಭವಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇದನ್ನೂ ಓದಿ : ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ
ಬೌರಿಂಗ್ ಆಸ್ಪತ್ರೆಯಲ್ಲಿ 5 ಹಾಗೂ ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಒಬ್ಬರು ಅಭಿಮಾನಿಗಳು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಮೃತಪಟ್ಟವರು ಯಲಹಂಕ ಮೂಲದ ಓರ್ವ ಯುವತಿ ಹಾಗೂ 6 ಯುವಕರು ಎಂದು ಗುರುತಿಸಲಾಗಿದೆ.
18ನೇ ಆವೃತ್ತಿಯ ಐಪಿಎಲ್ ಟ್ರೋಫಿ ಗೆಲುವನ್ನು ಸಂಭ್ರಮಿಸಲು ಆರ್‌ಸಿಬಿ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದರು. ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಸೇರಿದಂತೆ ರಜತ್ ಪಾಟೀದಾರ್ ಪಡೆಗೆ ಆರ್‌ಸಿಬಿ ಫ್ಯಾನ್ಸ್ ಅದ್ಧೂರಿ ಸ್ವಾಗತ ಕೋರಿದರು. ಇದನ್ನೂ ಓದಿ :ಕೃಷಿ ಬೆಳೆಯನ್ನೇ ಧ್ವಂಸ ಮಾಡೋ ಅಪಾಯಕಾರಿ ಶಿಲೀಂಧ್ರ ಕಳ್ಳ ಸಾಗಾಣೆ-ಅಮೆರಿಕದಲ್ಲಿ ಇಬ್ಬರು ಚೀನಿಯರು ಅರೆಸ್ಟ್
ವಿಶೇಷ ಬಸ್‌ನಲ್ಲಿ ವಿಧಾನಸೌಧಕ್ಕೆ ಆಟಗಾರರನ್ನು ಕರೆತರಲಾಯಿತು. ಈ ವೇಳೆ ಮಾರ್ಗದುದ್ದಕ್ಕೂ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿ ಆಟಗಾರರನ್ನು ಅಭಿನಂದಿಸಿದರು. ಫ್ಯಾನ್ಸ್ ಕ್ರೇಜ್ ನೋಡಿ ಆಟಗಾರರು ಖುಷಿಪಟ್ಟರು.
ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಇತ್ತು. ಸಮಾರಂಭದಲ್ಲಿ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಸ್ಟೇಡಿಯಂ ಬಳಿ ನೆರೆದಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಇದನ್ನೂ ಓದಿ :ಕಾರಿನ ಮೇಲೆ ಮಗುಚಿ ಬಿದ್ದ ಸಿಮೆಂಟ್ ಟಿಪ್ಪರ್ – ಒಂದೇ ಕುಟುಂಬದ 9 ಮಂದಿ ದಾರುಣ ಅಂತ್ಯ