ಟೆಲ್ ಅವಿವ್/ಟೆಹ್ರಾನ್: ಆಪರೇಷನ್ ʻರೈಸಿಂಗ್ ಲಯನ್ʼ ಬಳಿಕ ಇಸ್ರೇಲ್-ಇರಾನ್ ನಡುವಿನ ಸಂಘರ್ಷ (Israel-Iran Conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಇರಾನ್ ಮಿಸೈಲ್ ದಾಳಿಗೆ ಇಸ್ರೇಲ್ ಕೂಡ ಮಿಸೈಲ್‌ಗಳ ಸುರಿಮಳೆಯನ್ನೇ ಸುರಿಸಿದೆ.
ಅಣ್ವಸ್ತ್ರ (Nuclear Site), ಮಿಲಿಟರಿ ನೆಲೆಗಳ ಬಳಿಕ ಇರಾನ್‌ನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ಮಾಡಲು ಶುರು ಮಾಡಿದೆ. ಇರಾನ್‌ನಲ್ಲಿ ಒಟ್ಟು 170ಕ್ಕೂ ಹೆಚ್ಚು ಸ್ಥಳಗಳು 720 ಮಿಲಿಟರಿ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ : ಕೊಡವ ಸಮಾಜದ ಮುಖಂಡರಿಂದ ಸಿ.ಎಂ.ಸಿದ್ಧರಾಮಯ್ಯ ಅವರಿಗೆ ಸಮ್ಮಾನ
ಈವರೆಗಿನ ದಾಳಿಯಲ್ಲಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅಣ್ವಸ್ತ್ರ ವಿಜ್ಞಾನಿಗಳು ಸೇರಿದಂತೆ ಈವರೆಗೆ 14 ಹಿರಿಯ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಅತ್ತ ಇರಾನ್ ಕೂಡ ಇಸ್ರೇಲ್ ಮೇಲೆ 200 ಖಂಡಾಂತರ ಕ್ಷಿಪಣಿಗಳು ಹಾಗೂ 100 ಡ್ರೋನ್‌ಗಳಿಂದ ಭೀಕರ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿದೆ. ಟೆಲ್ ಅವಿವ್, ಜೆರುಸಲೆಮ್ ಸೇರಿದಂತೆ ಮಿಲಿಟರಿ ಮತ್ತು ಸಾರ್ವಜನಿಕ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಹೀಗಾಗಿ ಉಭಯ ರಾಷ್ಟ್ರಗಳ ನಡುವಿನ ಸಂಘರ್ಷ 4ನೇ ದಿನವೂ ಮುಂದುವರಿದಿದೆ.
ಇತ್ತ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಟೆಹ್ರಾನ್ ಹೊತ್ತಿ ಉರಿಯಯತ್ತೆ, ನಿರಂತರ ದಾಳಿ ಇರಾನ್ ಮೇಲೆ ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅತ್ತ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಸ್ರೇಲ್ ಮೇಲೆ ಬೃಹತ್ ದಾಳಿ ನಡೆಸುವ ಸೂಚನೆ ಕೊಟ್ಟಿದೆ. ಜೊತೆಗೆ ಇಸ್ರೇಲ್‌ನಿಂದ ದಾಳಿ ಮುಂದುವರಿಯುವವರೆಗೂ ನಾವು ಕದನ ವಿರಾಮದ ಬಗ್ಗೆ ಮಾತನಾಡುವುದಿಲ್ಲ ಎಂದು ಒಮನ್ ಮತ್ತು ಕತಾರ್‌ನ ಮಧ್ಯಸ್ಥಿಕೆಯನ್ನು ಇರಾನ್ ತಿರಸ್ಕರಿಸಿದೆ.
ಇಸ್ರೇಲ್ ನಡೆಸಿದ ದಾಳಿಯಲ್ಲಿ 224 ಮಂದಿ ಸಾವನ್ನಪ್ಪಿದ್ದು, 1,277 ಜನರು ಗಾಯಗೊಂಡಿದ್ದಾರೆ. ಅದೇ ವೇಳೆ ಇರಾನ್ ನಡೆಸಿದ ದಾಳಿಯಲ್ಲಿ 14 ಇಸ್ರೇಲಿ ನಾಗರಿಕರು ಸಾವನ್ನಪ್ಪಿದ್ದು, 390 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.