ರಾಮನಗರ: ಶಬರಿಮಲೆ  ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಕನಕಪುರ ಮೂಲದ 18 ವರ್ಷದ ಅಯ್ಯಪ್ಪನ ಭಕ್ತನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮೂಲತಃ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್, ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. ಕಳೆದ ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ.  ಇದನ್ನೂ ಓದಿ : ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ ಸುವರ್ಣ ಸಂಭ್ರಮ

ಅಯ್ಯಪ್ಪನ ದರ್ಶನ ಮುಗಿಸಿ, ಬೆಟ್ಟ ಇಳಿಯುವಾಗ ಪ್ರಜ್ವಲ್‌ಗೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ :  ಅಂಗನವಾಡಿ ಶಿಕ್ಷಕಿಗೆ ಬಿಳ್ಕೊಡುಗೆ ಕಾರ್ಯಕ್ರಮ