ಮುಂಬೈ: ಅಹಮದಾಬಾದ್‌ನಲ್ಲಿ (Ahmedabad) ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 242ರ ಪೈಕಿ 241 ಮಂದಿ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಏರ್‌ ಇಂಡಿಯಾ (Air India) ವಿಯಾನಯಾನ ಸಂಸ್ಥೆ ಸ್ಪಷ್ಟನೆ ನೀಡಿದೆ.  ಇದನ್ನೂ ಓದಿ : ಅಹಮದಾಬಾದ್ ವಿಮಾನ ಪತನ | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌

ಈ ಕುರಿತು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ತಡರಾತ್ರಿ 12:41ರ ವೇಳೆಗೆ ಮಾಹಿತಿ ಹಂಚಿಕೊಂಡಿದೆ.

ಜೂನ್‌ 12ರಂದು ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ (London Gatwick) ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಗಿದೆ ಎಂದು ಏರ್‌ ಇಂಡಿಯಾ ದೃಢಪಡಿಸಿದೆ. 12 ವರ್ಷದ ಹಳೆಯ ಬೋಯಿಂಗ್‌ 787-8 (Boeing) ವಿಮಾನವು ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟಿದ್ದು, 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.  ಇದನ್ನೂ ಓದಿ : ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್‌ ಪ್ರಜೆಯಾಗಿದ್ದಾರೆ.

ದುರಂತರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಏರ್‌ ಇಂಡಿಯಾ ಆಳವಾದ ಸಂತಾಪ ಸೂಚಿಸುತ್ತದೆ. ನಾವು ಸಂತ್ರಸ್ತ ಕುಟುಂಬಗಳೊಂದಿಗೆ ಇದ್ದೇವೆ ಎಂದು ಹೇಳಿದೆ.

ಅಪಘಾತಕ್ಕೀಡಾದ ಏರ್‌ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ ʻಮೇ ಡೇ.. ಮೇ ಡೇ..ʼ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.