ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ನೃಪತುಂಗ ರಸ್ತೆಯ ಯವನಿಕಾ ಸಭಾಂಗಣದಲ್ಲಿ ಆಯೋಜಿಸಿದ್ದ ’24ನೇ ಅಂತಾರಾಷ್ಟ್ರೀಯ ಪದಕ ವಿಜೇತರು ಮತ್ತು ಅನೇಕ ರಾಷ್ಟ್ರೀಯ ಪದಕ ವಿಜೇತ’ರಿಗೆ ಸನ್ಮಾನ ಸಮಾರಂಭದಲ್ಲಿ ಗೃಹ ಸಚಿವ ಡಾ|ಜಿ.ಪರಮೇಶ್ವರ್ ಅವರು ಭಾಗವಹಿಸಿದರು.
ಇದನ್ನೂ ಓದಿ : ವಿವಿಧ ಗ್ರಾಮ ಪಂಚಾಯಿತಿಗಳಿಗೆ ಗೃಹ ಸಚಿವ ಡಾ| ಜಿ.ಪರಮೇಶ್ವರ್ ಭೇಟಿ
ಬಳಿಕ ಮಾತನಾಡಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಅನೇಕ ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದುಕೊಟ್ಟಿದ್ದಾರೆ. ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು. ಹೊಸ ಶೂಟಿಂಗ್ ರೇಂಜ್‌ಗಳನ್ನು ನಿರ್ಮಿಸುವ ಯೋಜನೆ ಇದೆ. ಇದಕ್ಕೆ ಭೂಮಿಯನ್ನು ಗುರುತಿಸುವಂತೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕೆ.ಗೋವಿಂದರಾಜ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಆಯುಕ್ತ ಚೇತನ್ ಆರ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಜಂಟಿ ನಿರ್ದೇಶಕ ಜೀತೇಂದ್ರ ಶೆಟ್ಟಿ, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಟಿ.ಅನಂತರಾಜು ಉಪಸ್ಥಿತರಿದ್ದರು.