ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವ “ಸೇವಾ ಸಂಭ್ರಮ” ಬಂಟ್ವಾಳ ತಾಲೂಕು ಮಣಿ ನಾಲ್ಕೂರು ಗ್ರಾಮದ ಬಡೆಕೊಟ್ಟು, ಕಟ್ಟದಪಡ್ಪು ಅರುಣೋದಯ ಸಭಾಭವನದಲ್ಲಿ ಇತ್ತೀಚೆಗೆ ಜರಗಿತು .

ಸಮಾಜ ಬಂಧುಗಳಿಂದ ಸಂಗ್ರಹಿಸಿ , ಜಿಲ್ಲೆಯ ವಿವಿಧ ಭಾಗದ ಒಟ್ಟು 11 ಜನ ಅನಾರೋಗ್ಯ ಪೀಡಿತ ಫಲಾನುಭವಿಗಳಿಗೆ ನಾಲ್ಕು ಲಕ್ಷ ರೂಗಳ ಆರ್ಥಿಕ ಸಹಕಾರ ನೀಡುವುದರ ಮೂಲಕ ಯುವಶಕ್ತಿ ಸೇವಾಪಥವು ಶಕ್ತ ಸಮಾಜ ಮತ್ತು ಅಶಕ್ತ ಸಮಾಜದ ನಡುವಿನ ಕೊಂಡಿಯೆನಿಸಿತು.

ಯುವಶಕ್ತಿ ರಕ್ತನಿಧಿಯ 10 ಸಾವಿರ ಯುನಿಟ್ ರಕ್ತದ ಪೂರೈಕೆಯ ಸಾರ್ಥಕತೆಯನ್ನು ಈ ಕ್ಷಣ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಯುವಸೇನೆಯ ಅಂಬ್ಯುಲೆನ್ಸ್‌ನಲ್ಲಿ ನಿರಂತರ ಸೇವೆಗೈಯುತ್ತಿರುವ ಅಪದ್ಬಾಂಧವ ಚಾಲಕ ರಘು ಅವರನ್ನು ಮತ್ತು ನಿರಂತರ ಸಮಾಜ ಸೇವೆಗೈಯುವ ಮಂಗಳೂರು ಪರಿಸರದ ಯುವ ಕಾರ್ಪೋರೇಟರ್ ಗಣೇಶ ಕುಲಾಲ್ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕರಾದ ವಾಸು ಪೂಜಾರಿಯವರು ವಹಿಸಿಕೊಂಡಿದ್ದರು.

ಅತಿಥಿಗಳಾಗಿ ತೆಂಕ ಕಜೆಕಾರ್ ಪಂಚಾಯಿತಿ ಸದಸ್ಯರಾದ ಸತೀಶ್ ಪೂಜಾರಿ ಕಜೆಕಾರ್ , ಪ್ರಗತಿಪರ ಕೃಷಿಕರಾದ ರೂಪೇಶ್ ಪೂಜಾರಿ ಬಡೆಕೊಟ್ಟು, ಅರುಣೋದಯ ಭಜನಾ ಮಂದಿರದ ಅಧ್ಯಕ್ಷರಾದ ಹೊನ್ನಪ್ಪ ಪೂಜಾರಿ ಮುದಲಾಡಿ, ಶಿವ ಛತ್ರಪತಿ ಸಂಸ್ಥೆಯ ಸುನೀಲ್ ಬಡೆಕೊಟ್ಟು ಪಾಲ್ಗೊಂಡು ಸೇವಾ ಸಂಭ್ರಮಕ್ಕೆ ಸಾಕ್ಷಿಯಾಗಿ ಶುಭ ಹಾರೈಸಿದರು.

ಯುವಶಕ್ತಿ ಬಂಧುಗಳು ತಮ್ಮ ಶುಭ ಸಂಭ್ರಮದಲ್ಲಿ ಸಮಾಜಕ್ಕೂ ಒಂದು ಪಾಲು ಯೆಂಬಂತೆ ಅರ್ಪಿಸಿದ ಶುಭನಿಧಿಯಲ್ಲಿ 3 ನೇ ಯೋಜನೆಯ ಮೂಲಕ 45,000/- ಮೌಲ್ಯದ ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ಥಳೀಯ ಮಣಿನಾಲ್ಕೂರು ಸರ್ಕಾರಿ ಶಾಲೆಗೆ ಹಸ್ತಾಂತರಿಸಲಾಯಿತು.

ಯುವಶಕ್ತಿ ಸೇವಾಪಥದ ಒಟ್ಟಿಗೆ ಸದಾ ಜೊತೆಯಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಿತ್ರಸಂಸ್ಥೆಗಳನ್ನು ಅಭಿನಂದಿಸಲಾಯಿತು.

ಯುವಶಕ್ತಿ ಕಡೇಶಿವಾಲಯ(ರಿ) ವತಿಯಿಂದ ಆಯೋಜಿಸಲಾಗಿದ್ದ ಜೈಶ್ರೀರಾಮ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು

ಹಿಂಜಾವೇ ಪ್ರಮುಖರಾದ ದಾಮೋದರ ನೆತ್ತರಕೆರೆ ಮುಖ್ಯ ಭಾಷಣಗೈದು ಸೇವಾಪಥ ನಡೆದು ಬಂದ ಸಿಂಹಾವಲೋಕನವನ್ನು ತಿಲಕ್ ಮುಂಡಾಲ ಮಂಡಿಸಿದರು.

ದಿನೇಶ್ ಬಡೆಕೊಟ್ಟು ಪ್ರಾಸ್ತವಿಕ ಮಾತಾನಾಡಿ, ಪ್ರಕಾಶ್ ಮುಂಡಾಲ ಸ್ವಾಗತಿಸಿ ವಿಜಿತ್ ಸಂಪೋಳಿ ವಂದಿಸಿದರು. ದೇವದಾಸ್ ಅಬುರ ಕಾರ್ಯಕ್ರಮ ನಿರೂಪಿಸಿದರು.

ಹಲವು ಗಣ್ಯರು ಸೇವಾಮಾಣಿಕ್ಯರು.ಯುವಶಕ್ತಿಯ ಸದಸ್ಯರು ದ್ವಿತೀಯ ಸೇವಾಸಂಭ್ರಮಕ್ಕೆ ಸಾಕ್ಷಿಯಾದರು. ಯುವಶಕ್ತಿ ಸೇವಾಪಥ ತನ್ನ ಸೇವಾ ಯೋಜನೆಯ ಮೂಲಕ ಈತನಕ ಒಟ್ಟು 78 ಲಕ್ಷ ರೂಪಾಯಿಗಳನ್ನು ಸಮಾಜದಿಂದ ಸಮಾಜಕ್ಕೆ ಸಮರ್ಪಿಸಲಾಗಿದೆ.