ಚಾಮರಾಜನಗರ: ಮಲೆಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ವಿಷ ಪ್ರಾಷನದಿಂದಲೇ ಮೃತ ಪಟ್ಟಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದ್ದಾರೆ.
ಹುಲಿ ಹಸುವಿನ ಹಿಂಬಂದಿಯಿಂದ ದಾಳಿ ಮಾಡಿದೆ. ಹುಲಿ ಮತ್ತು ಹಸುವಿನ ಎಲ್ಲಾ ಅಂಗಾಂಗಳನ್ನ ಲ್ಯಾಬ್ ಕಳುಹಿಸಲಾಗಿದೆ. ಮೂರು ದಿನದ ಹಿಂದೆ ಹುಲಿ ಸಾವನ್ನಪ್ಪಿದ್ದು ಇದಕ್ಕೆ ಯಾರು ಹೊಣೆಗಾರರು ಎಂಬುದನ್ನ ಇಲಾಖಾ ಮಟ್ಟದಲ್ಲಿ ತನಿಖೆ ಮಾಡುತ್ತೇವೆ ಎಂದರು.
ವಾಚರ್ ಗಳಿಗೆ ಸಂಬಳ ತಡವಾಗಿದೆ ಎಂಬುದಕ್ಕೆ ಗಸ್ತು ಮಾಡಿಲ್ಲ ಎಂಬ ಆರೋಪಗಳು ಇವೆ. ಎಲ್ಲದರ ಬಗ್ಗೆ ತನಿಖೆ ಮಾಡುತ್ತೇವೆ. ಹಸು ಯಾರದ್ದು ಎಂಬುದರ ಬಗ್ಗೆಯೂ ತನಿಖೆ ಮಾಡುತ್ತಿದ್ದೇವೆ. ಈ ಹಸು ತಮಿಳುನಾಡಿನಿಂದ ಬಂದಿರುವುದಾ ಅಥವಾ ಸ್ಥಳೀಯರದ್ದ ಎಂಬುದರ ಬಗ್ಗೆ ತನಿಖೆಯಾಗುತ್ತಿದೆ ಎಂದು ವಿವರಿಸಿದರು.