ವಿಧಾನಸೌಧ ಮುಂಭಾಗದಲ್ಲಿ ಇಂದು ನಡೆದ ಬೆಂಗಳೂರು ನಗರ ಸಂಚಾರ ಪೊಲೀಸ್ ಹಾಗೂ ಹೋಂಡಾ ಇಂಡಿಯಾ ಫೌಂಡೇಶನ್ ರವರ ಸಹಯೋಗದಲ್ಲಿ 50 ಸಂಚಾರ ಗಸ್ತು ವಾಹನಗಳನ್ನು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ಚಾಲನೆಗೃಹ ಸಚಿವ ಡಾ|ಜಿ.ಪರಮೇಶ್ವರ್ ಅವರು ಚಾಲನೆ ನೀಡಿದರು.
ಇದನ್ನೂ ಓದಿ : ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ ಹಾಗೂ ಮಾಸಿಕ ಸಂತೆ
ಬೆಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ ಬಿಟಿಪಿ ಅಸ್ತ್ರಂ ಆ್ಯಪ್‌ನಲ್ಲಿ ನೂತನವಾಗಿ ಸೇರ್ಪಡೆ ಮಾಡಿರುವ ‘ಇ-ಆ್ಯಕ್ಸಿಡೆಂಟ್’ ಹೊಸ ಆವಿಷ್ಕಾರವನ್ನು ಬಿಡುಗಡೆ ಮಾಡಿದೆ. ಅಪಘಾತದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು ಹಾಗೂ ವಿಮೆ ಪಡೆದುಕೊಳ್ಳಲು ಸರಳಗೊಳಿಸುವ ನಿಟ್ಟಿನಲ್ಲಿ ಪರಿಚಯಿಸಲಾಗಿದೆ. ಬಿಟಿಪಿ ಅಸ್ತ್ರಂ ಆ್ಯಪ್‌ನಲ್ಲಿ ಇ-ಆ್ಯಕ್ಸಿಡೆಂಟ್ ಮೂಲಕ ರಿಪೋರ್ಟ್ ಮಾಡಿದರೆ ಸುಲಭವಾಗಿ ವಿಮೆ ಪಡೆದುಕೊಳ್ಳಲು ಸಹಾಯವಾಗುತ್ತದೆ.
ಈ ಸಂದರ್ಭದಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ, ಹೋಂಡಾ ಇಂಡಿಯಾ ಸಂಸ್ಥೆಯ ಮುಖ್ಯಸ್ಥರಾದ ಸುನೀಲ್ ಕುಮಾರ್ ಮಿತ್ತಲ್, ಪ್ರಭು ನಾಗರಾಜ್ ಅವರು ಉಪಸ್ಥಿತರಿದ್ದರು.