ಶಿವಮೊಗ್ಗ: ಓದುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ (Student) ನೇಣಿಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಇದನ್ನೂ ಓದಿ: ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನ : ಸೌರ ವಿದ್ಯುತ್ ಘಟಕದ ಉದ್ಘಾಟಣೆ

ಸೃಷ್ಟಿ (14) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಳು. ಪೋಷಕರು ಚೆನ್ನಾಗಿ ಓದುವಂತೆ ಅವಳಿಗೆ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದಿದ್ದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸೃಷ್ಟಿಯನ್ನ ಮನೆಯಲ್ಲಿಯೇ ಬಿಟ್ಟು ತಂದೆ-ತಾಯಿ ಇಬ್ಬರು ದೇವಸ್ಥಾನಕ್ಕೆ ತೆರಳಿದ್ದರು. ಈ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೂಜೆ ಮುಗಿಸಿ ಮನೆಗೆ ಬಂದಾಗ ಸೃಷ್ಟಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪೋಷಕರು ಓದು ಓದು ಎಂದು ಪದೇ ಪದೆ ಹೇಳುತ್ತಿದ್ದದ್ದೇ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.