ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ಮತ್ತು ಚಲನಚಿತ್ರ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ (ಮೇ.11) ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸಂಭವಿಸಿದೆ.
ಮೂಲತಃ ಉಡುಪಿ ನಿವಾಸಿಯಾಗಿರುವ ರಾಕೇಶ್ ಪೂಜಾರಿ, ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ.
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಕಿರುತೆರೆಯಲ್ಲಿ ಅಲ್ಲದೇ ಹಿರಿತೆರೆಯಲ್ಲಿಯೂ ಆಕ್ಟೀವ್ ಆಗಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರಲ್ಲಿ ರಾಕೇಶ್ ನಟಿಸಿದ್ದು, ತಮ್ಮ ಪಾತ್ರದ ಶೂಟಿಂಗ್ ಕೂಡ ಮುಗಿಸಿ ಕೊಟ್ಟಿದ್ದರು ಎಂದು ಚಿತ್ರತಂಡ ಮೂಲಗಳು ತಿಳಿಸಿವೆ.
ರಿಷಬ್ ನಿರ್ದೇಶನದ ಬಹುನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ರಲ್ಲಿ ಪಾತ್ರವೊಂದರದಲ್ಲಿ ರಾಕೇಶ್ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಶೂಟಿಂಗ್ ಕೂಡ ಮುಗಿಸಿ ಕೊಟ್ಟಿದ್ದರು. ಈ ಚಿತ್ರದ ಮೇಲೆ ನಟ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ನಿನ್ನೆ (ಮೇ 11) ಬೆಳಗ್ಗೆ ‘ಕಾಂತಾರ’ ಶೂಟಿಂಗ್ ಮುಗಿಸಿ ಸಂಜೆ ಗೆಳೆಯರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ, ಸ್ನೇಹಿತರ ಜೊತೆ ಇದ್ದಾಗ ಹೃದಯಘಾತದಿಂದ ರಾಕೇಶ್ ನಿಧನರಾಗಿದ್ದಾರೆ.
ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ಆಗಿದ್ದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ರಾಕೇಶ್ ಪೂಜಾರಿ ಪ್ರಸ್ತುತ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್‌ನಲ್ಲಿ ಕಾಣಿಸಿಕೊಂಡಿದ್ದರು. ಕಾಮಿಡಿ ಕಿಲಾಡಿ ವಿನ್ನರ್ ರಾಕೇಶ್ ಪೂಜಾರಿ ಅವರ ನಿಧನದಿಂದ ಎಲ್ಲರಿಗೂ ಗರಬಡಿದಂತೆ ಆಗಿದ್ದು, ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪ್ರೇಮ್ ಕೂಡ ಸಂತಾಪ ಸೂಚಿಸಿದ್ದಾರೆ.
ಅವರು ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ.