ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇದ್ದುದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು. ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ.