ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಾಳ್ತಿಲ ಗ್ರಾಮ ಪಂಚಾಯತ್ ಗೆ ಉಪ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ನಿತಿನ್ ಕುಮಾರ್ ಗೆ 419 ಮತ, ಕಾಂಗ್ರೆಸ್ ನ ಯೋಗೀಶ್ ಗೆ 187 ಮತ, 5 ಮತ ಅಸಿಂಧು.
ನಿತಿನ್ ಕುಮಾರ್ ಗೆ 232 ಮತಗಳ ಅಂತರದ ಜಯ. ಇದನ್ನೂ ಓದಿ: ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ ಪೊಲೀಸ್ರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು
ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ರವರ ಬೂತ್ ನಲ್ಲೇ ನಡೆದ ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ದೊರೆತಿರುವುದು, ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ 16 ಬಿಜೆಪಿ ಸದಸ್ಯರು ಆಯ್ಕೆಯಾಗಿರುವುದು ವಿಶೇಷ. ಇದನ್ನೂ ಓದಿ: ಸಾಲ ಸೋಲ ಮಾಡಿ ವಿದೇಶದಲ್ಲಿ ಮಕ್ಕಳ ಓದಿಸೋ ಮುನ್ನ ಯೋಚಿಸಿ: ಭಾರತೀಯ ಪೋಷಕರಿಗೆ ಉದ್ಯಮಿ ಮನವಿ
ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಅಣ್ಣು ಪೂಜಾರಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಉಪ ಚುನಾವಣೆ ನಡೆದಿತ್ತು. ಮುಂದಿನ ಆರು ತಿಂಗಳ ಅವಧಿಗೆ ಈ ಸದಸ್ಯ ಸ್ಥಾನ ಇರಲಿದೆ.ನಂತರ ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.