ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರಿಗೆ ಹೈಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಇದನ್ನೂ ಓದಿ :ಸ್ವಚ್ಛ ಮತ್ತು ಹಸಿರು ನಗರ ಸಾರಿಗೆಯನ್ನು ಉತ್ತೇಜಿಸಲು ದೆಹಲಿಯಲ್ಲಿ ವಿದ್ಯುತ್ ಚಾಲಿತ ಬಸ್ ಸೇವೆಗೆ ಪ್ರಧಾನಮಂತ್ರಿ ಚಾಲನೆ
ಡಿಎನ್ಎ ಸಂಸ್ಥೆಯ ಸಿಬ್ಬಂದಿ ಕಿರಣ್, ಸುಮಂತ್, ಸುನೀಲ್ ಮ್ಯಾಥ್ಯೂ ಹಾಗೂ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಯನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪಿಪಿ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದರೆ, ನ್ಯಾಯಾಲಯ ಆರೋಪಿಗಳನ್ನು ಜೂ.19ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಆರ್ಸಿಬಿಯ ಸಾಮಾಜಿಕ ಜಾಲತಾಣದಲ್ಲಿ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ನಡೆಯಲಿದೆ ಎಂದು ಪೋಸ್ಟ್ ಮಾಡಲಾಗಿತ್ತು. ಪೊಲೀಸರ ಅನುಮತಿ ಪಡೆಯದೇ ಬುಧವಾರ ಬೆಳಗ್ಗೆ ಈ ಪೋಸ್ಟ್ ಪ್ರಕಟವಾಗಿತ್ತು. ಇದನ್ನೂ ಓದಿ :ಪಡಿಬಾಗಿಲು ಹಿ.ಪ್ರಾ.ಶಾಲೆಯಲ್ಲಿ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ
ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಪರೇಡ್ಗೆ ಅನುಮತಿ ನಿರಾಕರಿಸಿದ ನಂತರವೂ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಡಿಲೀಟ್ ಆಗಿರಲಿಲ್ಲ. ಅಷ್ಟೇ ಅಲ್ಲದೇ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಣೆಗೆ ಉಚಿತ ಟಿಕೆಟ್ ಎಂದು ಪೋಸ್ಟ್ ಮಾಡಲಾಗಿತ್ತು. ಇದನ್ನು ನೋಡಿ ಲಕ್ಷಾಂತರ ಜನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸೇರಿದ್ದರು. ಇದರಿಂದ ನೂಕುನುಗ್ಗಲು ಉಂಟಾಗಿ 11 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದರು. ಈ ಘಟನೆಗೆ ಸಂಬಂಧಿಸಿದವರನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಅದರಂತೆ ಇಲ್ಲಿಯವರೆಗೆ ನಾಲ್ವರ ಬಂಧನವಾಗಿದೆ.