ಡೆಹ್ರಾಡೂನ್: ಟೇಕ್ ಆಫ್ ವೇಳೆ ತಾಂತ್ರಿಕ ದೋಷ ಉಂಟಾದ ಪರಿಣಾಮ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ನಡೆದಿದೆ.
ಘಟನೆಯಲ್ಲಿ ಪೈಲೆಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಪೈಲೆಟ್ ಹಾಗೂ ಐದು ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಈ ಹೆಲಿಕಾಪ್ಟರ್ ಕ್ರೆಸ್ಟೆಲ್ ವಿಮಾನಯಾನ ಸಂಸ್ಥೆಗೆ ಸೇರಿದೆ. ಇದನ್ನೂ ಓದಿ : ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ವಿಶ್ವ ಪರಿಸರ ದಿನಾಚರಣೆ
ಈ ಹೆಲಿಕಾಪ್ಟರ್ ರುದ್ರಪ್ರಯಾಗ ಜಿಲ್ಲೆಯ ಬಡಾಸು ಪ್ರದೇಶದ ಹೆಲಿಪ್ಯಾಡ್‌ನಿಂದ ಮಧ್ಯಾಹ್ನ 12:52ಕ್ಕೆ ಹೊರಟಿತ್ತು. ಆದರೆ ಟೇಕ್ ಆಫ್ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಹೆದ್ದಾರಿಯಲ್ಲಿಯೇ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ತುರ್ತು ಭೂಸ್ಪರ್ಶದ ವೇಳೆ ಹೆಲಿಕಾಪ್ಟರ್‌ನ ಹಿಂಭಾಗ ಕಾರಿಗೆ ತಾಗಿದ್ದು, ಕಾರು ಜಖಂಗೊಂಡಿದೆ.