ಲಕ್ನೋ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮದುವೆ ಮುಗಿಸಿ ಬರುತ್ತಿದ್ದ ಐವರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ  ಬುಲಂದ್‌ಶಹರ್‌  ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ : ಸಿಎಂ, ಡಿಸಿಎಂ, ಗೃಹಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ಬದೌನ್‌ನಲ್ಲಿ ನಡೆದ ಮದುವೆ ಮುಗಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಹಿನ್ನೆಲೆ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕಾರು ಲಾಕ್ ಆದ ಕಾರಣ ಹೊರಗೆ ಬರಲಾರದೇ ಐವರು ಸಜೀವ ದಹನವಾಗಿದ್ದಾರೆ. ಇದನ್ನೂ ಓದಿ : ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ – ಸಿ.ಎಂ.

ಮುಂಜಾನೆ 5:50ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.