ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅಸಮಾನತೆಯನ್ನು ತೊಲಗಿಸಿ ಎಲ್ಲರೂ ಮುಖ್ಯ ವಾಹಿನಿಗೆ ತರಬೇಕು ಎನ್ನುವುದೇ ರಾಜಕೀಯ ನೈಜ ಗುರಿ. ಸಂವಿಧಾನ ಕೂಡ ಇದನ್ನೇ ಹೇಳುತ್ತದೆ. ಮನುಷ್ಯತ್ವ ಎನ್ನುವುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದು ಇದ್ದಾಗ ಮಾತ್ರ ಸಮಸಮಾಜ ತರಲು ಸಾಧ್ಯವಾಗುತ್ತದೆ.
ರೈತರು ಸಾಲ ಮನ್ನಾ ಮಾಡಬೇಕೆಂದು ಒತ್ತಡ ತಂದಿದ್ದ ಸಂದರ್ಭದಲ್ಲಿ 50,000 ರೂ.ಗಳ ವರೆಗೆ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕುಗಳಲ್ಲಿ ರೈತರ ಸಾಲದ ಸಂಪೂರ್ಣ ವಿವರಗಳನ್ನು ನೀಡಿದವರು ರಾಜಣ್ಣ. ಅವರಿಲ್ಲದೇ ಹೋಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದರು.
ರಾಜಕೀಯದಲ್ಲಿ ಸೋಲು ಗೆಲವು ಸಾಮಾನ್ಯ. ನಾನೂ ಕೂಡ ನಾಲ್ಕು ಬಾರಿ ಸೋತು, ಒಂಭತ್ತು ಬಾರಿ ಗೆದ್ದಿದ್ದೇನೆ. ಸೋತರೂ ಗೆದ್ದರೂ ಬದ್ಧತೆಯಿರುವ ವಿಚಾರಗಳಲ್ಲಿ ಯಾವುದೇ ಕಾರಣಕ್ಕೂ ವಿಚಲಿತರಾಗಬಾರದು. ಇದನ್ನು ಮಾಡಿದರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಹುಟ್ಟು ಸಾವಿನ ನಡುವೆ ಬದುಕಿನ ಸಾರ್ಥಕಗೊಳಿಸಿಕೊಳ್ಳಬೇಕು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ರಾಮಲಿಂಗರೆಡ್ಡಿ, ಹೆಚ್.ಸಿ.ಮಹಾದೇವಪ್ಪ, ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಸಚಿವರಾದ ಹೆಚ್.ಆಂಜನೇಯ, ಮುರುಗೇಶ್ ನಿರಾಣಿ, ವೆಂಕಟರಮಣಪ್ಪ ಹಾಗೂ ಹಾಲಿ ಸಂಸದರು, ಶಾಸಕರುಗಳು ಮುಂತಾದವರು ಭಾಗವಹಿಸಿದ್ದರು.