ಬಂಟ್ವಾಳ : ಕವಿ, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ. ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು.
ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ, ಶಿರಸಿ, ಮೈಸೂರು, ದಾವಣಗೆರೆ, ಶಿವಮೊಗ್ಗ, ತೀರ್ಥ ಹಳ್ಳಿ, ಬೆಳಗಾವಿ, ದಾರವಾಡ, ಮಡಿಕೇರಿ, ಉತ್ತರಕನ್ನಡ, ಹಾಸನ, ಜಿಲ್ಲೆಗಳಿಂದ ಹಾಗೂ ಮುಂಬೈಯಿಂದ ನೂರಕ್ಕೂ ಹೆಚ್ಚು ಸಾಹಿತಿಗಳು, ಬರಹಗಾರರು ಸಣ್ಣ ಕಥೆ ಹಾಗೂ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಸಾಹಿತಿ, ಲೇಖಕರ ಉಪಸ್ಥಿತಿಯಲ್ಲಿ ಅತ್ಯುತ್ತಮವಾದ ಸಣ್ಣ ಕಥೆ, ಲಲಿತ ಪ್ರಬಂಧಗಳನ್ನು ಗುರುತಿಸಿ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಲಾಗಿದೆ.
ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ : ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ
ಅತೀ ಸಣ್ಣ ಕಥೆ ವಿಭಾಗದಲ್ಲಿ ಸುಲ್ತಾನ್ ಮನ್ಸೂರು ಕುಕ್ಕಾಜೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಸ್ಮಿತಾ ಅಮೃತರಾಜ್ ಸಂಪಾಜೆ ಪಡೆದು ಕೊಂಡಿದ್ದಾರೆ.
ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ರೂಪಕಲಾ ಆಳ್ವ ಹಾಗೂ ದ್ವಿತೀಯ ಸ್ಥಾನವನ್ನು ನಳಿನಿ ಭೀಮಪ್ಪ ಧಾರವಾಡ ಪಡೆದುಕೊಂಡಿರುತ್ತಾರೆ. ಇದನ್ನೂ ಓದಿ : ದೆಹಲಿಯಲ್ಲಿ ಸಿ.ಎಂ.ಸಿದ್ಧರಾಮಯ್ಯ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ
ಶಿಸ್ತು, ಕ್ರೀಯಾಶೀಲತೆಯ ಯುವವಾಹಿನಿಯಂತಹ ಸಂಸ್ಥೆಯ ಮೂಲಕ ಬಹುಮಾನ ಪಡೆದಿರುವುದು ಹೆಮ್ಮೆ ತಂದಿದೆ ಎಂದು ಲಲಿತ ಪ್ರಬಂಧ ಸ್ಪರ್ಧೆಯ ಪ್ರಥಮ ಬಹುಮಾನ ವಿಜೇತೆ ರೂಪಕಲಾ ಆಳ್ವ ತಿಳಿಸಿದರು
ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನರಿಕೊಂಬು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಉಮೇಶ್ ಬಾಯಾರು, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಚೇತನ್ ಮುಂಡಾಜೆ, ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ನೂತನ ಕಾರ್ಯದರ್ಶಿ ಮಧುಸೂದನ್ ಮದ್ವ ಉಪಸ್ಥಿತರಿದ್ದರು.