ಬೆಂಗಳೂರು ನಗರ ಪೊಲೀಸ್ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ’ ಕಾರ್ಯಕ್ರಮವನ್ನು ಗೃಹಸಚಿವ ಡಾ| ಜಿ.ಪರಮೇಶ್ವರ್ ಉದ್ಘಾಟಿಸಿದರು. ಬಳಿಕ ಮಾದಕ ವ್ಯಸನ ಮುಕ್ತ ಜೀವನ ನಡೆಸುವಂತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.
ಕಳೆದ ಒಂದು ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸರು 4000 ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿದ್ದಾರೆ. ಅವುಗಳನ್ನು ನಾಶಪಡಿಸಲು ಚಾಲನೆ ನೀಡಿದರ.
ಇದನ್ನೂ ಓದಿ : ಯೇನೆಪೋಯ ನರ್ಸಿಂಗ್ ಕಾಲೇಜು ರಾಜ್ಯ ಮಟ್ಟದ ಕಾರ್ಯಗಾರ
ಡ್ರಗ್ಸ್ ಬಳಕೆಯಿಂದ ಆಗುವ ದುಷ್ಪರಿಣಾಮದ ಕುರಿತು ಸಾಮಾಜಿಕ ಜಾಗೃತಿ ಮೂಡಿಸಲು ಪೊಲೀಸರೊಂದಿಗೆ ಕೈಜೋಡಿಸಿದ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತು ವಿಭಾಗದ ಪೊಲೀಸ್ ಮಹಾನಿರ್ದೇಶಕರಾದ ಡಾ.ಪ್ರಣವ್ ಮಹಾಂತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಆದರ್ಶ ಗ್ರೂಪ್ನ ಸಿಎಂಡಿ ಬಿ.ಎಂ.ಜಯಶಂಕರ್ ಅವರು ಉಪಸ್ಥಿತರಿದ್ದರು.