ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿತದಿಂದ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ. ಇದನ್ನೂ ಓದಿ: ಗುಜರಾತ್: ಮಧ್ಯದಲ್ಲೇ ಕುಸಿದ ಸೇತುವೆ – 5 ವಾಹನಗಳು ನದಿಗೆ, 8 ಸಾವು
ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (PMNRF) ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಅಪಘಾತದಲ್ಲಿ ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿತದಿಂದ ಉಂಟಾದ ಜೀವಹಾನಿ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ.
ಪ್ರತಿ ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಗಾಯಾಳುಗಳಿಗೆ ತಲಾ ರೂ.50,000 ನೀಡಲಾಗುವುದು
ಇದನ್ನೂ ಓದಿ : ಕರಿಬೇವು ಎಲೆಯ ಆರೋಗ್ಯ ಮಹತ್ವ