ರಾಜ್ಯದ ದಕ್ಷ ಪೊಲೀಸರ ಸೇವಾ ಸಾಧನೆಯನ್ನು ಗುರುತಿಸಿ, ಗೌರವಿಸಲು ಕನ್ನಡದ ಪ್ರತಿಷ್ಠಿತ ಸುದ್ದಿವಾಹಿನಿ Tv9Kannada ಸಂಸ್ಥೆಯು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ “ಟಿವಿ9 ಸಲ್ಯೂಟ್ 2025” ಕಾರ್ಯಕ್ರಮವನ್ನು  ಗೃಹ ಸಚಿವ ಡಾ| ಜಿ.ಪರಮೇಶ್ವರ ಅವರು   ಉದ್ಘಾಟಿಸಿದರು.

ಬಳಿಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸಿದ, ಸಾಧಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಿ, ಅಭಿನಂದಿಸಿದರು.

ಸಚಿವರಾದ ಎಚ್.ಕೆ.ಪಟೀಲ್‌,  ಡಾ| ಎಚ್.ಸಿ. ಮಹದೇವಪ್ಪ, ಸತೀಶ್‌ ಜಾರಕೀಹೊಳೆ, ಆರ್.ಬಿ.ತಿಮ್ಮಾಪುರ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಟಿವಿ9 ಸಂಸ್ಥೆಯ ವ್ಯವಸ್ಥಾಪಕ ಸಂಪಾದಕರಾದ ರಾಹುಲ್ ಚೌದರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.