ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

Posted by Bantwala Isiri News | Jul 13, 2025 | ಬಂಟ್ವಾಳ | 0 |

ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

– ಅವಧಿಪೂರ್ವ ಜನನ, ಅಪೌಷ್ಟಿಕತೆ ಹಾಗೂ ಕಡಿಮೆ ತೂಕದ ಮಕ್ಕಳಿಗೆ ಅನುಕೂಲ
– 75 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿದೆ ಅಮೃತಧಾರೆ

ಬಳ್ಳಾರಿ: ಅವಧಿ ಪೂರ್ವ ಹೆರಿಗೆ, ಕಡಿಮೆ ತೂಕ ಹಾಗೂ ಆನಾರೋಗ್ಯ ಪೀಡಿತ ಶಿಶುಗಳಿಗೆ ಎದುರಾಗುವ ತಾಯಿಯ ಎದೆಹಾಲಿನ (Breast Milk) ಕೊರತೆ ನೀಗಿಸಲು ಅಮೃತಧಾರೆ (Amruthadhare) ಹೆಸರಿನಡಿ ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ ಮೊಟ್ಟ ಮೊದಲ ಬಾರಿ ಬಳ್ಳಾರಿ (Ballari) ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದಲ್ಲಿ ಹಾಲಿನ ಬ್ಯಾಂಕ್‌ ಸ್ಥಾಪಿಸಲು ಭರದ ಸಿದ್ಧತೆ ನಡೆದಿದೆ.

ಬಳ್ಳಾರಿ ವಿಮ್ಸ್‌ನಲ್ಲಿ ನಿತ್ಯ 25-30 ಹೆರಿಗೆಗಳಾಗುತ್ತಿದ್ದು, ತಾಯಿ ಮತ್ತು ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ. ಹಲವು ಸೌಲಭ್ಯಗಳ ಮಧ್ಯೆ ಕಡಿಮೆ ತೂಕ, ಅವಧಿ ಪೂರ್ವ ಹಾಗೂ ಅನಾರೋಗ್ಯ ಶಿಶುಗಳ ಜನನ ಸಾಮಾನ್ಯವಾಗಿದೆ. ಇಂಥ ಮಕ್ಕಳು ತಾಯಿಯ ಎದೆಹಾಲಿನ ಕೊರತೆ ಎದುರಿಸುವುದನ್ನು ತಡೆಯುವ ದೂರದೃಷ್ಟಿಯಿಂದ ಹಾಲಿನ ಬ್ಯಾಂಕ್ ಸ್ಥಾಪನೆಗೆ ಯೋಜಿಸಲಾಗಿದೆ. ಇದನ್ನೂ ಓದಿ :  ಜು.14 ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ
ಬಳ್ಳಾರಿ ಮಹಾನಗರ ಪಾಲಿಕೆಯಿಂದ 25 ಲಕ್ಷ ರೂ. ಹಾಗೂ ಜಿಲ್ಲಾಡಳಿತದ 50 ಲಕ್ಷ ರೂ. ಸೇರಿ ಒಟ್ಟು 75 ಲಕ್ಷ ರೂ. ಅನುದಾನದಲ್ಲಿ ಹಾಲಿನ ಬ್ಯಾಂಕ್‌ (Breast Milk Bank) ನಿರ್ಮಾಣ ಕೈಗೊಂಡಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ. ಈ ಬ್ಯಾಂಕ್ ಒಟ್ಟು 510 ಬಾಟಲ್‌ಗಳಲ್ಲಿ ಹಾಲು ಸಂಗ್ರಹ ಸಾಮರ್ಥ್ಯ ಹೊಂದಿದೆ
ಕಲ್ಯಾಣ ಕರ್ನಾಟಕದಲ್ಲೇ ಹೆಚ್ಚು ಅಪೌಷ್ಟಿಕತೆ, ಅವಧಿ ಪೂರ್ವ ಹೆರಿಗೆ, ಕಡಿಮೆ ತೂಕ ಹಾಗೂ ಅನಾರೋಗ್ಯ ಪೀಡಿತ ಮಕ್ಕಳ ಜನನ ಸೇರಿ ಇತರ ಕಾರಣಗಳಿಂದ ಈ ಭಾಗದ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ತೀವ್ರವಾಗಿ ಕಾಡುತ್ತದೆ. ಹೆರಿಗೆ ಸಂದರ್ಭದಲ್ಲಿ ಮಕ್ಕಳಿಗೆ ಎದುರಾಗುವ ತಾಯಿ ಹಾಲಿನ ಕೊರತೆ ನೀಗಿಸಲು ರಾಜ್ಯದಲ್ಲಿರುವ ಬೆರಳೆಣಿಕೆಯಷ್ಟು ಹಾಲಿನ ಬ್ಯಾಂಕ್‌ ಗಳಿಗೆ ತೆರಳಲಾಗದ ಪಾಲಕರು ಹಸುವಿನ ಹಾಲು, ಗಂಜಿಯ ಮೊರೆ ಹೋಗುವುದು ಸಾಮಾನ್ಯವಾಗಿದೆ.

ತಾಯಿ ಹಾಲಿನ ದಾನಕ್ಕೂ ಅವಕಾಶ

ಹಾಲುಣಿಸುವ ಮಹಿಳೆಯರು ತಮ್ಮ ಹೆಚ್ಚುವರಿ ಹಾಲನ್ನು ದಾನ ಮಾಡಲು ಸಿದ್ಧರಿದ್ದರೆ ಈ ಬ್ಯಾಂಕ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಜನಿಸಿದ ಮಗು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ಅಸುನೀಗಿದರೆ ಅಂತಹ ತಾಯಿ ಹಾಲನ್ನು ದಾನ ಮಾಡಬಹುದಾಗಿದೆ. ಹೀಗೆ ಸಂಗ್ರಹಿಸಿದ ಹಾಲನ್ನು ಸುರಕ್ಷಿತವಾಗಿ ಇರಿಸಲು ವಿಮ್ಸ್‌ನಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Share:

Rate:

Previousಜು.14 ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ
Nextಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಮೇ 25 ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಶ್ರದ್ಧಾಂಜಲಿ ಸಭೆ

ಮೇ 25 ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಶ್ರದ್ಧಾಂಜಲಿ ಸಭೆ

24 May 2025

ಶ್ರೀ ಕಲ್ಲುರ್ಟಿ ಕಲ್ಕುಡ ಸೇವಾ ಟ್ರಸ್ಟ್ ಕೇದ್ದೆಲು ಇದರ ಅಧ್ಯಕ್ಷರಾಗಿ ರಂಜಿತ್ ಕೇದ್ದೆಲು ಆಯ್ಕೆ

ಶ್ರೀ ಕಲ್ಲುರ್ಟಿ ಕಲ್ಕುಡ ಸೇವಾ ಟ್ರಸ್ಟ್ ಕೇದ್ದೆಲು ಇದರ ಅಧ್ಯಕ್ಷರಾಗಿ ರಂಜಿತ್ ಕೇದ್ದೆಲು ಆಯ್ಕೆ

13 March 2025

ದೆಹಲಿ: ಕೇಂದ್ರೀಯ ಚುನಾವಣಾ ಸಮಿತಿಯ ಸಭೆ

ದೆಹಲಿ: ಕೇಂದ್ರೀಯ ಚುನಾವಣಾ ಸಮಿತಿಯ ಸಭೆ

12 March 2024

ಗಿಳಿಕಿಂಜತಾಯಿ ದೈವದ ದೊಂಪದ ಬಲಿ ನೇಮೋತ್ಸವ

ಗಿಳಿಕಿಂಜತಾಯಿ ದೈವದ ದೊಂಪದ ಬಲಿ ನೇಮೋತ್ಸವ

28 January 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ವಿದ್ಯಾಗಿರಿ, ಬಂಟ್ವಾಳ- ಪುನಶ್ಚೇತನ ಕಾರ್ಯಕ್ರಮ
    ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ವಿದ್ಯಾಗಿರಿ, ಬಂಟ್ವಾಳ- ಪುನಶ್ಚೇತನ ಕಾರ್ಯಕ್ರಮ
  • ಚಹಾಗೆ ಇಲಿ ಪಾಷಾಣ ಬೆರೆಸಿ ಕುಡಿದು – ಪುತ್ರಿ ಸಾವು, ತಾಯಿ ಗಂಭೀರ
    ಚಹಾಗೆ ಇಲಿ ಪಾಷಾಣ ಬೆರೆಸಿ ಕುಡಿದು – ಪುತ್ರಿ ಸಾವು, ತಾಯಿ ಗಂಭೀರ
  • ಪವಿತ್ರ ಪಿಪ್ರಹ್ವಾ ಅವಶೇಷಗಳು 127 ವರ್ಷಗಳ ನಂತರ ತವರಿಗೆ ವಾಪಸ್ – ಪ್ರಧಾನಮಂತ್ರಿ ಸ್ವಾಗತ
    ಪವಿತ್ರ ಪಿಪ್ರಹ್ವಾ ಅವಶೇಷಗಳು 127 ವರ್ಷಗಳ ನಂತರ ತವರಿಗೆ ವಾಪಸ್ – ಪ್ರಧಾನಮಂತ್ರಿ ಸ್ವಾಗತ
  • ಕರ್ನಾಟಕ ಪಬ್ಲಿಕ್ ಶಾಲೆಯ ನವೀಕರಣಗೊಂಡ ಶಾಲಾ ಕೊಠಡಿಗಳ ಉದ್ಘಾಟನೆ
    ಕರ್ನಾಟಕ ಪಬ್ಲಿಕ್ ಶಾಲೆಯ ನವೀಕರಣಗೊಂಡ ಶಾಲಾ ಕೊಠಡಿಗಳ ಉದ್ಘಾಟನೆ
  • ಕೃಷಿ ಗದ್ದೆಗಳು ಕಣ್ಮರೆಯಾಗಿ ಸಾಂಪ್ರದಾಯಿಕ ವ್ಯವಸಾಯ ಮರೆಯಾಗಿದೆ – ಜನಾರ್ಧನ ಪೂಜಾರಿ
    ಕೃಷಿ ಗದ್ದೆಗಳು ಕಣ್ಮರೆಯಾಗಿ ಸಾಂಪ್ರದಾಯಿಕ ವ್ಯವಸಾಯ ಮರೆಯಾಗಿದೆ – ಜನಾರ್ಧನ ಪೂಜಾರಿ
  • ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ – ಸಿ.ಎಂ. ಚಾಲನೆ
    ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ – ಸಿ.ಎಂ. ಚಾಲನೆ
  • ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ
    ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ
  • ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
    ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
  • ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ ಅಧಿಕಾರ ಸ್ವೀಕಾರ
    ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ ಅಧಿಕಾರ ಸ್ವೀಕಾರ
  • Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
    Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Designed by Elegant Themes | Powered by WordPress

error: Content is protected !!