ತುಮಕೂರು ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಭೂ ಸ್ವಾಧೀನ ಪ್ರಕ್ರಿಯೆ ಮತ್ತು ಕಾಮಗಾರಿಯ ಕುರಿತಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದೆ.
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಕೆಐಎಡಿಬಿ, ತುಮಕೂರು ರಾಯದುರ್ಗ ರೈಲ್ವೆ ಹಾಗೂ ತುಮಕೂರು ದಾವಣಗೆರೆ ರೈಲ್ವೆ ಯೋಜನೆಗಳ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ, ಪರಿಹಾರ ಪಾವತಿಸಿರುವ ಮತ್ತು ಬಾಕಿ ಇರುವುದನ್ನು ಮಾಹಿತಿ ಪಡೆದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚಿಸಿದೆ.
ಇದನ್ನೂ ಓದಿ : ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ನಂ.1 ಪಟ್ಟ
ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅವರು, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ ಅವರು ಹಾಗೂ ಎಲ್ಲ ಯೋಜನೆಗಳ ವಿಶೇಷ ಭೂಸ್ವಾಧೀನ ಅಧಿಕಾರಿಗಳು ಉಪಸ್ಥಿತರಿದ್ದರು.