ಬಂಟ್ವಾಳ: ಮಾದಕವಸ್ತುಗಳಿಗೆ ಇಂದಿನ ಯುವಜನತೆ ಹೆಚ್ಚೆಚ್ಚು ಆಕರ್ಷಿತರಾಗುತ್ತಿರುವುದು ಸಮೀಕ್ಷೆಗಳಿಂದ ತಿಳಿಯುತ್ತಿದೆ. ಯುವಜನತೆಯುದಾರಿತಪ್ಪಿದಲ್ಲಿದೇಶಕ್ಕೆ ಮಾರಕವಾಗುವುದುಎಂದು ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಂ.ಡಿ.ಮಂಚಿ ನುಡಿದರು. ಇದನ್ನೂ ಓದಿ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಡಿಯಲ್ಲಿ ಆಯೋಜಿಸಿದ್ದ ‘ನಶಾಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಎನ್ನೆಸ್ಸೆಸ್‌ ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಎಲ್ಲರನ್ನೂ ಸ್ವಾಗತಿಸಿದರು. ವೇದಿಕಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಅಖಿಲಾ ಪೈ ಉಪಸ್ಥಿತರಿದ್ದರು. ಇದನ್ನೂ ಓದಿ : 5 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸೈಬರ್ ಸೆಕ್ಯೂರಿಟಿ ಸಂಶೋಧನಾ ಘಟಕ