ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಕಟ್ಟಡಗಳಿಗೆ ನೀಡಲಾಗಿರುವ ಅಗ್ನಿಶಾಮಕ ನಿರಾಪೇಕ್ಷಣಾ ಪತ್ರ (ಎನ್‌ಒಸಿ) ಸಂಬಂಧಿಸಿದಂತೆ ಆರೋಗ್ಯ ಇಲಾಖೆ‌ ಮತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದರು.  ಇದನ್ನೂ ಓದಿ : ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಹಾಗೂ ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ
ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕರಾದ ಡಾ. ಹೆಚ್.ಡಿ.ರಂಗನಾಥ್, ಡಾ. ಎನ್.ಟಿ.ಶ್ರೀನಿವಾಸ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್‌ಚಂದ್ರ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಐಜಿಪಿ ನಂಜುಂಡಸ್ವಾಮಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.