ಆನೇಕಲ್: ಟೈರ್ ಬ್ಲಾಸ್ಟ್ (Tyre Blast) ಆದ ಪರಿಣಾಮ ನಿಯಂತ್ರಣ ತಪ್ಪಿ ಖಾಸಗಿ ಕಂಪನಿಯ ಕಾಂಪೌಂಡ್ ಗೋಡೆಗೆ ಖಾಸಗಿ ಬಸ್ (Private Bus) ಡಿಕ್ಕಿಯಾಗಿ 10 ಮಂದಿ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ (Tamil Nadu) ಹೊಸೂರಿನ (Hosur) ದರ್ಗಾ ಎಂಬಲ್ಲಿ ನಡೆದಿದೆ.  ಇದನ್ನೂ ಓದಿ : ಆರೋಗ್ಯ ಇಲಾಖೆ‌ ಮತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ

ಬೆಂಗಳೂರು-ಹೊಸೂರು ಹೆದ್ದಾರಿಯ ಹೊಸೂರಿನಲ್ಲಿ ಚಲಿಸುತ್ತಿದ್ದ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಘಟನೆ ಸಂಭವಿಸಿದ ವೇಳೆ ಬಸ್ಸಿನಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಪೈಕಿ 10 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪ್ಕಾಟ್ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ :  ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಹಾಗೂ ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ