2025ರ ಮಹಿಳಾ ಏಷ್ಯಾ ಕಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಮಹಿಳಾ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು ಹಾಗೂ ತಂಡ ಯಶಸ್ವಿಯಾಗಿ ಬೆಳ್ಳಿ ಪದಕವನ್ನು ಪಡೆದುಕೊಂಡರು ಮತ್ತು ರಾಷ್ಟ್ರಕ್ಕೆ ಹೆಮ್ಮೆ ತಂದರು ಎಂದು ಪ್ರಧಾನಮಂತ್ರಿಯವರು ಹೇಳಿದರು. ಇದನ್ನೂ ಓದಿ : ಇಂಜಿನಿಯರ್ ಗಳ ದಿನದಂದು ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿಯವರು ಇಂದು ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ :
“ನಮ್ಮ ಭಾರತೀಯ ಮಹಿಳಾ ಹಾಕಿ ತಂಡವು ಮಹಿಳಾ ಏಷ್ಯಾ ಕಪ್ 2025ರಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಅವರಿಗೆ ಅಭಿನಂದನೆಗಳು. ಅವರ ದೃಢನಿಶ್ಚಯ ಮತ್ತು ತಂಡದ ಮನೋಭಾವವು ಅತ್ಯುತ್ತಮವಾಗಿದೆ. ಮುಂಬರುವ ಸಮಯಗಳಲ್ಲಿ ಉತ್ತಮ ಪ್ರದರ್ಶನ ನೀಡಲಿ ಎಂದು ಅವರಿಗೆ ಶುಭ ಹಾರೈಸುತ್ತೇನೆ.” ಇದನ್ನೂ ಓದಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮೂಡ್ನೂರು ಒಕ್ಕೂಟದ 20 ನೇ ವಾರ್ಷಿಕೋತ್ಸವ
