ಒಂದೇ ದಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖದೀಮರ ಕೈಚಳಕ
ಬೆಂಗಳೂರು: ನಗರದಲ್ಲಿ ಸರಗಳ್ಳರ ಅಟ್ಟಹಾಸ ಜೋರಾಗಿದೆ. ಕುತ್ತಿಗೆಗೆ ಲಾಂಗ್ ಇಟ್ಟು, ಬೆರಳು ಕತ್ತರಿಸಿ 55 ಗ್ರಾಂ ಮೌಲ್ಯದ ಚಿನ್ನ ಕಳ್ಳತನ ಮಾಡಿರುವ ಘಟನೆ ಗಿರಿನಗರ (Girinagar) ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ (Eshwari Nagar) ನಡೆದಿದೆ. ಇದನ್ನು ಓದಿ : ಏಷ್ಯಾ ಕಪ್ ಬೆಳ್ಳಿ ಪದಕ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
ಉಷಾ ಅವರ 10 ಗ್ರಾಂ ಹಾಗೂ ವರಲಕ್ಷ್ಮಿ ಅವರ 45 ಗ್ರಾಂ ಕಳ್ಳತನವಾಗಿದೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದಲ್ಲದೇ ಗಿರಿನಗರ, ಇಂದಿರಾ ನಗರ, ಕೊತ್ತನೂರು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಆರೋಪಿಗಳು ಕೈಚಳಕ ತೋರಿಸಿ, ಮೊಬೈಲ್, ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾಗಿದ್ದಾರೆ.
ಸದ್ಯ ನಗರ ಪೊಲೀಸರು ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ತಂಡ ರಚಿಸಿ, ತನಿಖೆ ಮುಂದುವರಿಸಿದ್ದಾರೆ.
