ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆ (Upper Krishna Project) ಮೂರನೇ ಹಂತದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಆಲಮಟ್ಟಿ ಡ್ಯಾಂ (Almatti Dam) ಎತ್ತರ ಹೆಚ್ಚಳ ಯೋಜನೆ ಸಂಬಂಧ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಇದಕ್ಕಾಗಿಯೆ ವಿಶೇಷ ಸಚಿವ ಸಂಪುಟ ಸಭೆ ಇಂದು ನಡೆದಿದ್ದು ಸಭೆಯಲ್ಲಿ ರೈತರ ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗಿದೆ.
ಮುಳಗಡೆ ವ್ಯಾಪ್ತಿಯಲ್ಲಿ ನೀರಾವರಿ ಜಮೀನಿಗೆ ಎಕರೆಗೆ 40 ಲಕ್ಷ ರೂ., ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ನಿಗದಿ ಮಾಡಲಾಗಿದೆ. ಅದರಂತೆ ಕೆನಾಲ್ ಭಾಗದಲ್ಲಿ ನೀರಾವರಿ ಜಮೀನಿಗೆ ಎಕರೆಗೆ 30 ಲಕ್ಷ ರೂ. ಒಣ ಭೂಮಿಗೆ 25 ಲಕ್ಷ ರೂ. ದರ ನಿಗದಿ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಡ್ಯಾಂ ಎತ್ತರಿಸಲು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆ ಆಗಲಿದೆ. 5 ಲಕ್ಷ ಹೆಕ್ಟೇರ್‌ಗೂ ಹೆಚ್ಚಿನ ಜಾಗಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಬರಡು ಭೂಮಿಗೆ ನೀರು ಕೊಟ್ಟಂತೆ ಆಗಲಿದೆ ಎಂದರು.
