ಮಡಿಕೇರಿ: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ (Kushalnagar)  ತಾಲೂಕಿನ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ನಡೆದಿದೆ.

ಸಂಜನಾ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಸೋಮವಾರ (ಸೆ.22) ಮನೆಯ ಎರಡನೇ ಮಹಡಿಯಲ್ಲಿರುವ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ :  ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿ ದಿನೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವತಿಯ ತಂದೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸದ್ಯ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ  ಇದನ್ನೂ ಓದಿ : ನಾಳೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ – ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ