ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಪೊಲೀಸ್ ಸಿಬ್ಬಂದಿಗಳ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ ಹಾಗೂ ಮನೆಮನೆಗೆ ಪೊಲೀಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ. ಈ ವೇಳೆ, ಸಾರ್ವಜನಿಕರ ಅನುಕೂಲಕ್ಕಾಗಿ ಅಭಿವೃದ್ಧಿಪಡಿಸಿರುವ ‘ಮಹಿಳಾ ಸುರಕ್ಷತಾ ಆ್ಯಪ್’, ಬಿಡುಗಡೆ ಮಾಡಿದೆ ,ಮಾಡಿದರು.
ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ರವರು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಸಿ.ಬಿ.ಸುರೇಶ್ ಬಾಬು, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅರುಣ್ ಚಕ್ರವರ್ತಿ, ಕೇಂದ್ರ ವಲಯ ಐಜಿಪಿ ಲಾಭೂ ರಾಮ್ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಮುಂತಾದವರು ಇದ್ದರು.