ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರನ್ನು ಅಭಿನಂದಿಸಿ, ಸನ್ಮಾನ ಮಾಡಿ, ತಲಾ ಐದು ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ತಿಳಿಸಿದೆ.‌  ಇದನ್ನೂ ಓದಿ :ಸಂವಿಧಾನ ದಿನದಂದು ಪ್ಯಾರಿಸ್‌ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ಮನೋಜ್ ಕುಮಾರ್, ಸಂಚಾಲಕರಾದ ರವೀಂದ್ರ, ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್.ಸುಧಾಕರ್ ಅವರುಗಳು ಉಪಸ್ಥಿತರಿದ್ದರು.