ಬೆಂಗಳೂರು: ಸರ್ಕಾರಿ ಶಾಲೆಗಳ ಎಲ್‌ಕೆಜಿ-ಯುಕೆಜಿ (LKG-UKG) ಮಕ್ಕಳಿಗೂ ಬಿಸಿಯೂಟ  ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ :ಸಹಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ

ಡಿಸೆಂಬರ್ 1 ರಿಂದಲೇ ಅನ್ವಯವಾಗುವಂತೆ ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು ಕೊಡಲಿದೆ. ಬಿಸಿಯೂಟ ಮಾಡುವ ಅಡುಗೆಯವರಿಗೂ ಗೌರವಧನ ನೀಡುವಂತೆ ಆದೇಶದಲ್ಲಿ ಶಿಕ್ಷಣ ಇಲಾಖೆ ಉಲ್ಲೇಸಿದೆ.

ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಮಾರ್ಗಸೂಚಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಈ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.