ಭಾರತಕ್ಕೆ ಈ ದಿನ ವಿಜಯ್ ದಿವಸ್ ಇದ್ದಂತೆ. 1971 ರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದಲ್ಲಿ ಭಾರತೀಯ ನೌಕಾಪಡೆಯು ಮಹತ್ವದ ಪಾತ್ರ ವಹಿಸಿತ್ತು. ಇದನ್ನೂ ಓದಿ : ಡಿ.7ರಂದು ಅರ್ಜುನ್ ಭಂಡಾರ್ಕರ್ ಅವರಿಗೆ ಹುಟ್ಟೂರ ಅಭಿನಂದನಾ ಸಮಿತಿ ವತಿಯಿಂದ ಹುಟ್ಟೂರ ಸನ್ಮಾನ

ಡಿಸೆಂಬರ್ 3 ರಂದು ಪಾಕಿಸ್ತಾನವು ಭಾರತೀಯ ವಾಯುನೆಲೆಯ ಮೇಲೆ ದಾಳಿ ಮಾಡಿದಾಗ, ನಮ್ಮ ನೌಕಾಪಡೆಯು ಆಪರೇಷನ್‌ ಟ್ರೈಡೆಂಟ್‌ ಹೆಸರಿನ ಕಾರ್ಯಾಚರಣೆಯಲ್ಲಿ ಡಿಸೆಂಬರ್ 4 ಮತ್ತು 5 ರ ರಾತ್ರಿ ಪ್ರತಿದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಈ ಕಾರ್ಯಾಚರಣೆಯಲ್ಲಿ ಹಲವು ಸೈನಿಕರು ವೀರ ಮರಣವನ್ನು ಹೊಂದಿದರು. ಹಾಗಾಗಿ ಆಪರೇಷನ್‌ ಟ್ರೈಡೆಂಟ್‌ನಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ದೇಶ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಡಿ ವೀರ ಮರಣ ಹೊಂದಿದ ವೀರ ಯೋಧರನ್ನು ಸ್ಮರಿಸುವ ಸಲುವಾಗಿ ಡಿಸೆಂಬರ್‌ 4 ರಂದು ಭಾರತೀಯ ನೌಕಾಪಡೆ ದಿನವನ್ನು ಆಚರಿಸಲಾಗುತ್ತದೆ.

ಈ ದಿನ ಹಿರಿಯ ನೌಕಾ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಭದ್ರತೆಗೆ ಕೊಡುಗೆ ನೀಡುವ ನೌಕಾ ಸಿಬ್ಬಂದಿಗಳಿಗೆ ಗೌರವ ಸಲ್ಲಿಸಲಾಗುತ್ತದೆ. ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.