ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇದನ್ನೂ ಓದಿ : ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳವನ್ನು ಉದ್ಘಾಟಿಸಿದ – ಸಿ.ಎಂ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು ತಿಂಗಳಿಂದ ಐಸಿಯುನಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
94 ವರ್ಷದ ಶಾಮನೂರು ಶಿವಶಂಕರಪ್ಪ ಅವರು ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಹ ಇತ್ತೀಚೆಗೆ ಆಸ್ಪತ್ರೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದ್ದರು. ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅಭಿಮಾನಿಳಿಂದ ಪ್ರಾರ್ಥನೆ ನೆರವೇರಿತ್ತು. ದುರದೃಷ್ಟವಶಾತ್ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
