ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು. ಇದನ್ನೂ ಓದಿ : ಪ್ರಧಾನಮಂತ್ರಿ ಅವರಿಗೆ ‘ಆರ್ಡರ್ ಆಫ್ ಒಮಾನ್’ ಗೌರವ ಪ್ರದಾನ
ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಆರೋಗ್ಯ ಸೇತು’ ಸಂಚಾರಿ ಆರೋಗ್ಯ ಘಟಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು.
ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ.
ಈ ವೇಳೆ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.