ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಇಂದು ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಸುಧಾರಣೆಗೆ ಮುನ್ನುಡಿ ಬರೆದ ದಾರ್ಶನಿಕ ನಾರಾಯಣ ಗುರುಗಳ ಜೀವನ – ಉಪದೇಶಗಳನ್ನು ಸ್ಮರಿಸಿದರು.
ಶ್ರೀಮಠದ ಗುರುಗಳಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ಸರ್ಕಾರದ ಸಚಿವರಾದ ವಿ.ಎನ್.ವಾಸವನ್, ಸಂಸದರಾದ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.