ಬಂಟ್ವಾಳ : ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು| ವಂದಿತಾ ಇವರು ೨೦೨೫-೨೬ ನೇ ಸಾಲಿನ ಪ್ರತಿಷ್ಠಿತ ರಾಷ್ಟç ಮಟ್ಟದ “ರಿಲಯನ್ಸ್ ಫೌಂಡೇಶನ್ ಸ್ಕಾಲರ್‌ಶಿಪ್”ಗೆ ಆಯ್ಕೆಯಾಗಿದ್ದು ಒಂದೂವರೆ ಲಕ್ಷ ವಿದ್ಯಾರ್ಥಿವೇತನವನ್ನು ಪಡೆದಿರುತ್ತಾರೆ. ಇದನ್ನೂ ಓದಿ :ನಿಶಾನಿ ಡ್ಯಾನ್ಸ್ ಗ್ರೂಪ್ ನರಿಕೊಂಬು, ಇದರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯ ಕ್ರಮ

ಅವರನ್ನು ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಕೂಡಿಗೆ ಪಾಂಡುರಂಗ ಶೆಣೈ, ಕಾರ್ಯದರ್ಶಿಗಳಾದ ಶ್ರೀ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಶ್ರೀ ಅನಿರುದ್ಧ್ ಕಾಮತ್, ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಸಂಚಾಲಕರಾದ ಶ್ರೀಮತಿ ಕೆ ರೇಖಾ ಶೆಣೈ, ಪ್ರಾಂಶುಪಾಲರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.