ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು  ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿ ಈ ವೇಳೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಪನಮನದ ಮೂಲಕ ಗೌರವ ಸಲ್ಲಿಸಿ, ಅವರ ಅವಿಸ್ಮರಣೀಯ ಕೊಡುಗೆಯನ್ನು ಸ್ಮರಿಸಿದರು.
ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಮಾಜಿ ಸೈನಿಕರು, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಂದ ಪಥಸಂಚಲನ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನಡೆದ ದೇಶ ಭಕ್ತಿ ನೃತ್ಯ ಪ್ರದರ್ಶನಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ ಗೌಡ, ವಿಧಾನ ಪರಿಷತ್ ಸದಸ್ಯರಾದ ಆರ್.ರಾಜೇಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್, ಬಿಎಂಟಿಸಿ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ ಮುಂತಾದವರು ಇದ್ದರು.