ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಮಹಾರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವಲ್ಲಿ ಮುಂಚೂಣಿಯಲ್ಲಿದ್ದು, ಕಠಿಣ ಪರಿಶ್ರಮಿ ವ್ಯಕ್ತಿತ್ವದ ವ್ಯಕ್ತಿಯಾಗಿ, ಶ್ರೀ ಅಜಿತ್ ಪವಾರ್ ಅವರನ್ನು ವ್ಯಾಪಕವಾಗಿ ಗೌರವಿಸಲಾಗುತ್ತಿತ್ತು” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. “ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಕೂಡ ಗಮನಾರ್ಹವಾಗಿದೆ”. “ಅವರ ಅಕಾಲಿಕ ನಿಧನವು ತುಂಬಾ ಆಘಾತಕಾರಿ ಮತ್ತು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಇದನ್ನೂ ಓದಿ : ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರ
“ಎಕ್ಸ್” ತಾಣದ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಈ ರೀತಿ ತಿಳಿಸಿದ್ದಾರೆ:
“ಶ್ರೀ ಅಜಿತ್ ಪವಾರ್ ಅವರು ಜನರ ನಾಯಕರಾಗಿದ್ದರು, ತಳಮಟ್ಟದ ಸಂಪರ್ಕವನ್ನು ಹೊಂದಿದ್ದರು. ಮಹಾರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವಲ್ಲಿ ಮುಂಚೂಣಿಯಲ್ಲಿದ್ದ ಕಠಿಣ ಪರಿಶ್ರಮಿ ವ್ಯಕ್ತಿತ್ವದ ವ್ಯಕ್ತಿಯಾಗಿ, ಅವರನ್ನು ವ್ಯಾಪಕವಾಗಿ ಗೌರವಿಸಲಾಯಿತು. ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಕೂಡ ಗಮನಾರ್ಹವಾಗಿದೆ. ಅವರ ಅಕಾಲಿಕ ನಿಧನವು ತುಂಬಾ ಆಘಾತಕಾರಿ ಮತ್ತು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.”