ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ

Posted by Bantwala Isiri News | Jan 28, 2026 | ಬಂಟ್ವಾಳ | 0 |

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
ಮುಂಬೈ: ವಿಮಾನ ಪತನಗೊಂಡು (Plane Crash) ಮೃತಪಟ್ಟ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ (Ajit Pawar) ಅವರ ಮೃತದೇಹವನ್ನು ವಾಚ್‌ ಮತ್ತು ಬಟ್ಟೆಯಿಂದ ಗುರುತಿಸಲಾಗಿದೆ. ಇದನ್ನೂ ಓದಿ : ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ

ಪವಾರ್‌ ಇದ್ದ ವಿಮಾನ ಬುಧವಾರ ಇಳಿಯಲು ಪ್ರಯತ್ನಿಸಿದಾಗ ಬಾರಾಮತಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆ ಇತ್ತು. ಪೈಲಟ್‌ಗೆ ಸರಿಯಾದ ಗೋಚರತೆ ಇಲ್ಲದೇ ವಿಮಾನ ಪತನವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. VSR ವೆಂಚರ್ಸ್ ನಿರ್ವಹಿಸುತ್ತಿದ್ದ ಬೊಂಬಾರ್ಡಿಯರ್ ಲಿಯರ್ಜೆಟ್-45, ವಿಮಾನ ನಿಲ್ದಾಣದದಲ್ಲಿ ಪತನಗೊಂಡು, ಅದರಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಬೆಳಗ್ಗೆ ಗೋಚರತೆ ತೀವ್ರವಾಗಿ ಕಡಿಮೆಯಾಗಿತ್ತು. ವಿಮಾನ ಪತನಗೊಂಡ ವಿಚಾರ ತಿಳಿದು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಆದರೆ, ಅಪಘಾತದ ತೀವ್ರತೆಗೆ ಜಿಟ್‌ ಸಂಪೂರ್ಣ ಸುಟ್ಟು ಕರಕಲಾಗಿತ್ತು.

ವಿಮಾನದ ಅವಶೇಷಗಳಲ್ಲಿ ಮೃತದೇಹಗಳನ್ನು ಗುರುತಿಸುವುದು ಕಷ್ಟಕರವಾಗಿತ್ತು. ಪವಾರ್ ದೇಹವನ್ನು ಅವರ ವಾಚ್‌ ಮತ್ತು ಬಟ್ಟೆಗಳನ್ನು ಆಧರಿಸಿ ಗುರುತಿಸಲಾಯಿತು. ಉಳಿದವರನ್ನು ಬಟ್ಟೆ ಮತ್ತು ಅವರ ಇತರೆ ವಸ್ತುಗಳ ಆಧಾರದಲ್ಲಿ ಗುರುತು ಪತ್ತೆ ಮಾಡಲಾಗಿದೆ.
ಪವಾರ್ ತಮ್ಮ ವೈಯಕ್ತಿಕ ಭದ್ರತಾ ಅಧಿಕಾರಿ, ಒಬ್ಬ ಸಹಾಯಕ ಮತ್ತು ಇಬ್ಬರು ಪೈಲಟ್‌ಗಳೊಂದಿಗೆ ಪ್ರಯಾಣಿಸುತ್ತಿದ್ದರು. ಐದು ಮಂದಿ ಪ್ರಯಾಣಿಕರಲ್ಲಿ ಯಾರೂ ಬದುಕುಳಿದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆ ಆರಂಭಿಸಿದೆ. ವಿಮಾನದ ಅಂತಿಮ ಕ್ಷಣಗಳ ಮಾಹಿತಿ ದಾಖಲಿಸಲು ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ನಿರ್ಣಾಯಕ ಪಾತ್ರ ವಹಿಸುತ್ತವೆ. ಆ ಸಮಯದಲ್ಲಿ ವಿಮಾನ ನಿಲ್ದಾಣದ ಹವಾಮಾನ ವಿವರಗಳು ಸಹ ಅವುಗಳಲ್ಲಿ ದಾಖಲಾಗಿರುತ್ತವೆ.

 

ಅಜಿತ್‌ ಪವಾರ್‌ ಅವರ ಸಾವು ಮಹಾರಾಷ್ಟ್ರದ ರಾಜಕೀಯ ವ್ಯವಸ್ಥೆಗೆ ದೊಡ್ಡ ಆಘಾತ ನೀಡಿದೆ. 66 ವರ್ಷದ ಪವಾರ್ ಅವರು ರಾಜ್ಯದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಉಪಮುಖ್ಯಮಂತ್ರಿಯಾಗಿ ಆರನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದರು.

Share:

Rate:

Previousಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
Nextಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು

ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು

19 July 2025

ಅಂಬ್ಲಮೊಗರು  ಹಿ. ಪ್ರಾ. ಶಾಲೆಯ ನೂತನ ಕೊಠಡಿ ಉದ್ಘಾಟನೆ

ಅಂಬ್ಲಮೊಗರು ಹಿ. ಪ್ರಾ. ಶಾಲೆಯ ನೂತನ ಕೊಠಡಿ ಉದ್ಘಾಟನೆ

2 February 2024

ನವದೆಹಲಿಯಲ್ಲಿ ಭಾರತ್ ಟೆಕ್ಸ್ 2024 ಉದ್ಘಾಟಿಸಿದ ಪ್ರಧಾನಿ

ನವದೆಹಲಿಯಲ್ಲಿ ಭಾರತ್ ಟೆಕ್ಸ್ 2024 ಉದ್ಘಾಟಿಸಿದ ಪ್ರಧಾನಿ

26 February 2024

ಮಾಣಿಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ : ಕ್ರೀಡಾಪಟುಗಳು ಅಧ್ಯಯನವನ್ನು ಪ್ರೀತಿಸಬೇಕು: ಪೈಯಡೆ

ಮಾಣಿಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ : ಕ್ರೀಡಾಪಟುಗಳು ಅಧ್ಯಯನವನ್ನು ಪ್ರೀತಿಸಬೇಕು: ಪೈಯಡೆ

28 October 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ – ಮುಗಿಲುಮುಟ್ಟಿದ ಪೋಷಕರ ಆಕ್ರಂದನ
    ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ – ಮುಗಿಲುಮುಟ್ಟಿದ ಪೋಷಕರ ಆಕ್ರಂದನ
  • ಬಂಟ್ವಾಳ: ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ ಮಹಿಳೆಗೆ ಗಂಭೀರ ಗಾಯ
    ಬಂಟ್ವಾಳ: ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ ಮಹಿಳೆಗೆ ಗಂಭೀರ ಗಾಯ
  • ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿನ ಹೋರಾಟ ಅಗತ್ಯ – ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ
    ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿನ ಹೋರಾಟ ಅಗತ್ಯ – ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ
  • ಮಳೆ ಕೊರತೆ ಮತ್ತು ಬರದ ನೈಜ ಪರಿಸ್ಥಿತಿ ಪರಿಶೀಲಿಸಲು ಆಗಮಿಸಿರುವ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡದೊಂದಿಗಿನ ಸಭೆ
    ಮಳೆ ಕೊರತೆ ಮತ್ತು ಬರದ ನೈಜ ಪರಿಸ್ಥಿತಿ ಪರಿಶೀಲಿಸಲು ಆಗಮಿಸಿರುವ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡದೊಂದಿಗಿನ ಸಭೆ
  • ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್‌(Smit Machchhar) ಅವರನ್ನು  ದುಬೈ ಯುವರಾಜ ಖುದ್ದು ಭೇಟಿ
    ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್‌(Smit Machchhar) ಅವರನ್ನು ದುಬೈ ಯುವರಾಜ ಖುದ್ದು ಭೇಟಿ
  • ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಉದ್ಘಾಟಿಸಿದ – ಸಿ.ಎಂ.
    ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಉದ್ಘಾಟಿಸಿದ – ಸಿ.ಎಂ.
  • 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್‌ಗೆ 1 ಕೋಟಿ ರೂ. ಘೋಷಣೆ
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್‌ಗೆ 1 ಕೋಟಿ ರೂ. ಘೋಷಣೆ
  • ಹಾಸನ: ಮಗನ ಸಾವಿನಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
    ಹಾಸನ: ಮಗನ ಸಾವಿನಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
  • Atal Pension Yojana : ಅಟಲ್ ಪಿಂಚಣಿ ಯೋಜನೆಪ್ರತಿ ತಿಂಗಳು ಕೇವಲ 42 ರೂ. ಠೇವಣಿ ಮಾಡುವ ಮೂಲಕ ಪಿಂಚಣಿಗೆ ಅರ್ಹರಾಗಬಹುದು.
    Atal Pension Yojana : ಅಟಲ್ ಪಿಂಚಣಿ ಯೋಜನೆಪ್ರತಿ ತಿಂಗಳು ಕೇವಲ 42 ರೂ. ಠೇವಣಿ ಮಾಡುವ ಮೂಲಕ ಪಿಂಚಣಿಗೆ ಅರ್ಹರಾಗಬಹುದು.
  • ನಾವು ಎಲ್ಲವನ್ನೂ ಕಳೆದುಕೊಂಡಿದ್ದೆವು’: ಮುಂಬೈನಲ್ಲಿ ಸ್ವಂತ ಮನೆಯನ್ನು ಹೊಂದುವ ತಂದೆಯ ಕನಸನ್ನು ನೆನೆದು ಭಾವುಕರಾದ ರೂಪಾಲಿ ಗಂಗೂಲಿ
    ನಾವು ಎಲ್ಲವನ್ನೂ ಕಳೆದುಕೊಂಡಿದ್ದೆವು’: ಮುಂಬೈನಲ್ಲಿ ಸ್ವಂತ ಮನೆಯನ್ನು ಹೊಂದುವ ತಂದೆಯ ಕನಸನ್ನು ನೆನೆದು ಭಾವುಕರಾದ ರೂಪಾಲಿ ಗಂಗೂಲಿ

Designed by Elegant Themes | Powered by WordPress

error: Content is protected !!