ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಬಜೆಟ್‌ ಪೂರ್ವಭಾವಿ ಮಾನ್ಯ ಮುಖ್ಯಮಂತ್ರಿಗಳಾಸ ಸಿದ್ದರಾಮಯ್ಯ ಅವರು  ಸಭೆ ನಡೆಸಿ, ಮುಂದಿನ ಆರ್ಥಿಕ ವರ್ಷದಲ್ಲಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳು ಮತ್ತು ಅನುದಾನದ ಬೇಡಿಕೆಯ ಮಾಹಿತಿ ಪಡೆದರು. ಇದನ್ನೂ ಓದಿ: ಎನ್.ಎಸ್.ಎಸ್. ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಸಹಕಾರ ಮನೋಭಾವನೆಯು ಬೆಳೆಯುತ್ತದೆ
 ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಎಂ.ಸಿ.ಸುಧಾಕರ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರು ಆದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.