2026-27ನೇ ಸಾಲಿನ‌ ಆಯವ್ಯಯದ ಪೂರ್ವಭಾವಿಯಾಗಿ ಇಂದು ತೋಟಗಾರಿಕೆ ಮತ್ತು ಗಣಿ, ಭೂ ವಿಜ್ಞಾನ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ  ಮಾನ್ಯಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಬಳಿಕ ಅನುದಾನ ಹಾಗೂ ಕಾರ್ಯಕ್ರಮಗಳ ಬೇಡಿಕೆಯನ್ನು ಆಲಿಸಿದರು. ಇದನ್ನೂ ಓದಿ : ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ
ತೋಟಗಾರಿಕೆ ಮತ್ತು ಗಣಿ, ಭೂ ವಿಜ್ಞಾನ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರು ಆದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.