2026-27ನೇ ಸಾಲಿನ ರಾಜ್ಯ ಬಜೆಟ್‌ಗೆ ಪೂರ್ವ ಸಿದ್ಧತೆಯಾಗಿ  ವಸತಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು  ಸಭೆ ನಡೆಸಿ, ಅವರ ಬೇಡಿಕೆಗಳು ಹಾಗೂ ಇಲಾಖೆಯ ಯೋಚನೆ – ಯೋಜನೆಗಳನ್ನು ಆಲಿಸಿದರು.   ಇದನ್ನೂ ಓದಿ : ಶ್ರೀ ವೆಂಕಟರಮಣಸ್ವಾಮಿ ಕಾಲೇಜು, ಬಂಟ್ವಾಳ : ಜೀತಪದ್ಧತಿ ರದ್ದತಿ ಪ್ರತಿಜ್ಞಾ ಕಾರ್ಯಕ್ರಮ
ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಶಾಸಕರು ಆದ ಎನ್.ಎ.ಹ್ಯಾರಿಸ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರೂ ಆದ ಬಿ.ಆರ್.ಪಾಟೀಲ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.