ಮಾನ್ಯ ಮುಖ್ಯ ಮಂತ್ರಿಗಳಾಸ ಸಿದ್ದರಾಮಯ್ಯ ಅವರು  ಮಂಗಳವಾರ ನಿಧನರಾದ ಹಿರಿಯ ಪತ್ರಕರ್ತ, ವಿಧಾನ ಪರಿಷತ್‌ನ ಮಾಜಿ ಸದಸ್ಯರೂ ಆಗಿದ್ದ ಪಿ.ರಾಮಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ :  ವಸತಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಿ.ಎಂ.ಸಭೆ

ಐದು ದಶಕಗಳಿಗೂ ಅಧಿಕ ಕಾಲ ಪತ್ರಕರ್ತರಾಗಿ ರಾಜ್ಯದ ಹಿತಾಸಕ್ತಿಯ ವಿಚಾರಗಳಲ್ಲಿ ಮೊದಲು ದನಿಯೆತ್ತುತ್ತಿದ್ದ ರಾಮಯ್ಯನವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರರು.

ಈ  ಸಂದರ್ಭದಲ್ಲಿ  ಶಾಸಕರಾದ ರಿಜ್ವಾನ್ ಅರ್ಷದ್, ಮಾಜಿ ಸಚಿವರಾದ ಅಶ್ವಥ್ ನಾರಾಯಣ್, ನನ್ನ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದರು.