ರಾಯಚೂರು: ಬೈಕ್‌ಗೆ ಟ್ರಕ್ ಡಿಕ್ಕಿ (Truck hits Bike) ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur) ಬಸವೇಶ್ವರ ವೃತ್ತದಲ್ಲಿ ನಡೆದಿದೆ.
ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19), ಫಯಾಜ್( 26) ಮೃತ ದುರ್ದೈವಿಗಳು. ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಇದನ್ನೂ ಓದಿ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿದ- ಡಾ|ಜಿ.ಪರಮೇಶ್ವರ್
ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿದ್ದಾರೆ.
